ಹಿರಿಯ ಗಾಯಕ ಚಂದ್ರಶೇಖರ ಕೆದ್ಲಾಯ ನಿಧನ

ನಿವೃತ್ತ ಶಿಕ್ಷಕ, ಗಮಕಿ, ಆಕಾಶವಾಣಿ ಕಲಾವಿದ ಚಂದ್ರಶೇಖರ್ ಕೆದ್ಲಾಯ(72) ಇಂದು ಬೆಳಗ್ಗೆ ಹೃದಯಾಘಾತದಿಂದ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಚಂದ್ರಶೇಖರ ಕೆದ್ಲಾಯ ಮಂಗಳೂರಿನ ಕೆನರಾ ಪ್ರೌಢ ಶಾಲೆಯಲ್ಲಿ ಮತ್ತು 35 ವರ್ಷಗಳ ಕಾಲ ಬ್ರಹ್ಮಾವರದ  ನಿರ್ಮಲಾ ಪ್ರೌಢ ಶಾಲೆಯಲ್ಲಿ  ಸೇವೆ ಸಲ್ಲಿಸಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ (1992-93), ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ (2008) ಯನ್ನು ಪಡೆದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ತಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Latest Indian news

Popular Stories