ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಪಡೆಯಲು ಕುಟುಂಬದ ಯಜಮಾನಿ ಮಹಿಳೆ ಎಂಬುದಾಗಿ ರೇಷನ್ ಕಾರ್ಡ್ ನಲ್ಲಿ ಇರಬೇಕಾಗಿರುತ್ತದೆ.
ಆದ್ರೇ ರಾಜ್ಯದ ಅನೇಕ ಪಡಿತರ ಕುಟುಂಬದ ಕಾರ್ಡ್ ಗಳಲ್ಲಿ ಹೀಗೆ ಇರಲಿಲ್ಲ. ಇದರಿಂದಾಗಿ ಯೋಜನೆಯ ಸೌಲಭ್ಯದಿಂದ ವಂಚಿತರಾಗೋ ಸಾಧ್ಯತೆ ಇತ್ತು. ಈ ಹಿನ್ನಲೆಯಲ್ಲಿ ಈಗ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನರ ಹೆಸರು ಬದಲಾವಣೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಆಹಾರ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೇಷನ್ ಕಾರ್ಡ್ ಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ ಎಂದು ಹೇಳಿದೆ. ಆ ಬಗ್ಗೆ ಮುಂದೆ ಓದಿ.
ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ?
- ರೇಷನ್ ಕಾರ್ಡ್ಗೆ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಕುಟುಂಬದ ಯಜಮಾನರ ಬಳಿ ರೇಷನ್ ಕಾರ್ಡ್ ಹಾಗೂ ಅದರ ಜೆರಾಕ್ಸ್ ಪ್ರತಿ
- ಮಗುವಿನ ಅಥವಾ ಕುಟುಂಬದ ಹೊಸ ಸದಸ್ಯರ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್
- ಮಗುವಾಗಿದಲ್ಲಿ ಪೋಷಕರ ಆಧಾರ್ ಕಾರ್ಡ್.
- ಹೊಸ ವಿವಾಹಿತ ಮಹಿಳೆಯಾಗಿದ್ದರೆ ಆಧಾರ್ ಕಾರ್ಡ್, ವಿವಾಹ ಪ್ರಮಾಣಪತ್ರ, ತನ್ನ ಪೋಷಕರ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.
ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ಮಾಡಲು ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ
kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಹೋಮ್ ಪೇಜ್‌ನಲ್ಲಿರುವ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಆಯ್ಕೆ ಒತ್ತಿ ಕ್ಲಿಕ್ ಮಾಡಿ.
ಹೊಸ ಫಾರ್ಮ್ ತೆರೆಯಲಿದೆ, ಹೊಸ ಕುಟುಂಬ ಸದಸ್ಯರ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ
https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಿ