ಅಲ್ಪಸಂಖ್ಯಾತರಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ಅರ್ಜಿ ಆಹ್ವಾನ

ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನೊಳಿಸುತತಿರುವ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ತರಬೇತಿ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ, ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸಲು ಈ ಯೋಜನೆಯಡಿ ಬ್ಯೂಟಿ ಪಾರ್ಲರ್ (ಪುರುಷ ಮತ್ತು ಮಹಿಳೆಯರಿಗೆ) ಪ್ರಮಾಣೀಕರಣ ಕೋರ್ಸ್, ಹೆವಿ ಅರ್ಥ ಮೂವರ್ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ) ತರಬೇತಿ, ಶಾರ್ಟ ಹ್ಯಾಂಡ್ ಟ್ರೇನಿಂಗ್, ಭದ್ರತಾ ಸೇವೆಗಳ ತರಬೇತಿ, ಆಪೀಸ್ ಅಡ್ಮಿನಿಸ್ಟ್ರೇಶನ್ ಮತ್ತು ರಿಟೈಲ್ ಮಾರ್ಕೆಟಿಂಗ್ ತರಬೇತಿ ನೀಡಲಾಗುವುದು.

ಅರ್ಹ ಆಸಕ್ತ ಅಭ್ಯರ್ಥಿಗಳು :

https://kmdconline.karnataka.gov.in/portal/home ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 15-12-2023 ಕೊನೆಯ ದಿನಾಂಕವಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Latest Indian news

Popular Stories