Featured StoryNational

ಕೆಂಪುಕೋಟೆ ಮೇಲೆ ಸತತ 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿ ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಋಣಿಯಾಗಿದ್ದೇವೆ. ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದರು.

ದೆಹಲಿಯ ಕೆಂಪುಕೋಟೆ ಮೇಲೆ 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಹೆಚ್​ಡಿ ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಶಿವರಾಜ್​ ಸಿಂಗ್ ಚವ್ಹಾಣ್, ಜೈಶಂಕರ್, ವಿಪಕ್ಷ ನಾಯಕ ರಾಹುಲ್ ಗಾಂಧಿ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button