ElectionBidar

ಚುನಾವಣಾ ಫಲಿತಾಂಶ: ವಿಜಯೋತ್ಸವಕ್ಕೆ ಆಯೋಗ ಬ್ರೇಕ್

ಬೆಂಗಳೂರು: ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 2 ರಂದು ಪ್ರಕಟಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ಮದ್ರಾಸ್ ಹೈಕೋರ್ಟ್ನಿಂದ ತೀವ್ರ ಟೀಕೆಗೆ ಗುರಿಯಾಗಿರುವ ಚುನಾವಣಾ ಆಯೋಗವು ಮತ ಎಣಿಕೆಗಾಗಿ ಮಾರ್ಗಸೂಚಿ ಪ್ರಕಟಿಸಿದೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಯಾರೂ ವಿಜಯೋತ್ಸವ, ಸಂಭ್ರಮಾಚರಣೆ ಮಾಡುವಂತಿಲ್ಲ. ಮತ ಎಣಿಕೆ ಕೇಂದ್ರದ ಹೊರಗೆ ಜನ ಸೇರುವಂತಿಲ್ಲ. ವಿಜೇತ ಅಭ್ಯರ್ಥಿಯು ಗೆಲುವಿನ ಪ್ರಮಾಣಪತ್ರ ಪಡೆಯಲು ಕೇವಲ ಇಬ್ಬರೊಂದಿಗೆ ಹೋಗಲು ಅವಕಾಶ ನೀಡಲಾಗಿದೆ. ಇನ್ನು ಇದರೊಂದಿಗೆ ಆಯೋಗವು ಇತರ ನಿರ್ಬಂಧಗಳನ್ನ ಸಹ ವಿಧಿಸಿದೆ.
ಮತದಾನ ಕೇಂದ್ರದೊಳಗೆ ಪಿಪಿಇ ಕಿಟ್ ಧರಿಸುವುದು ಕಡ್ಡಾಯ. 45 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಲ್ಲಿ , ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನ ಸಹ ತೋರಿಸಬೇಕಾಗುತ್ತದೆ ಎಂದು ಆಯೋಗ ಹೇಳಿದೆ. ಲಸಿಕೆಯ 2ನೇ ಡೋಸ್ ತೆಗೆದುಕೊಂಡವರು ಮಾತ್ರ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಬಹುದು.
ಕೊರೊನಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನ ಮಧ್ಯೆ, ಇತ್ತೀಚಿನ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ, ಮದ್ರಾಸ್ ಹೈಕೋರ್ಟ್ ಕೂಡ ಚುನಾವಣಾ ಆಯೋಗವನ್ನು ಖಂಡಿಸಿತು. ಕರೋನಾ ತರಂಗಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಹೇಳಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button