Bidar

ಬ್ರಿಮ್ಸ್ ಅವ್ಯವಸ್ಥೆ ಸರಿಪಡಿಸಿ: ಖಾಶಂಪುರ

ಬೀದರ್ : ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಅಲ್ಲದೇ ಸಿಟಿ ಸ್ಕ್ಯಾನ್ ಮಷೀನ್ ಕೆಟ್ಟುನಿಂತಿದೆ. ಲ್ಯಾಬ್ ಗಳ ಸಮಸ್ಯೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಇಲ್ಲಿ ಆಗ್ರಹಿಸಿದ್ದಾರೆ.
ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕೋವಿಡ್ – 19 ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಾ ಸಾಗುತ್ತಿದೆ.
ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕಾದ ಆಸ್ಪತ್ರೆ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದರೆ ಹೇಗೆ..?
ಖಾಸಗಿ ಲ್ಯಾಬ್ ಗಳಿಗೆ, ಆಸ್ಪತ್ರೆಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡಲ್ಲಿ 6 ಸಾವಿರ ರೂ. ವರೆಗೂ ಸಿಟಿ ಸ್ಕ್ಯಾನ್ ಬಿಲ್ ಮಾಡಲಾಗುತ್ತಿದೆ. ಬಡಜನರಿಗೆ ಇದು ಸಾಧ್ಯವಾಗುತ್ತದೆಯೇ, ಜಿಲ್ಲಾ ಆಸ್ಪತ್ರೆಯಲ್ಲಿ ಒಂದೇ ಸಿಟಿ ಸ್ಕ್ಯಾನ್ ಮಷೀನ್ ಇರುವುದೂ ಸಮಸ್ಯೆಯಾಗಿದೆ ಎಂದು ಹೇಳಿದರು.
ಸಚಿವ ಡಾ. ಸುಧಾಕರ್ ಅವರು ಮಾತನಾಡಿ, ನಾಳೆಯಿಂದ ಸಿಟಿ ಸ್ಕ್ಯಾನ್ ಮಷೀನ್ ವರ್ಕ್ ಮಾಡುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಂತ್ರಿಕ ಸಮಸ್ಯೆಯಿಂದ ಸಿಟಿ ಸ್ಕ್ಯಾನ್ ಮಷೀನ್ ಕೆಲಸ ಮಾಡುತ್ತಿರಲಿಲ್ಲ. ದುರಸ್ತಿಗೆ ಕೊಟ್ಟಿದ್ದೇವೆ. ಇಂದು ಸಂಜೆಯೆ ದುರಸ್ತಿಯಾಗುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದರು.
ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು, ಬ್ರಿಮ್ಸ್ ನಲ್ಲಿ ಸೇವೆ ಸಲ್ಲಿಸುವ ಅಟೆಂಡರ್ ಗಳಿಗೆ ಪಿಪಿಇ ಕಿಟ್ ಕೊಡುತ್ತಿಲ್ಲ ಎಂದು ದೂರಿದರು.
ಆಸ್ಪತ್ರೆಯ ಸ್ವಚ್ಚತೆಯ ವಿಚಾರದಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಂಬAಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button