ಬೀದರ್: ಬಸವಕಲ್ಯಾಣ ಉಪಚುನಾವಣೆಯ ಮತಗಳ ಎಣಿಕೆ ಮೇ 2 ರಂದು ಬೀದರ್ ನಗರದ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ನಡೆಯಲಿದೆ.
ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ 17 ರಂದು ಮತ ಎಣಿಕೆಗಾಗಿ 12 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆಗಳಿಗೆ ಬ್ರೇಕ್ ಹಾಕಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಮೆರವಣಿಗೆಯನ್ನೂ ನಡೆಸುವಂತಿಲ್ಲ.
ಮತ ಎಣಿಕೆ ಕೇಂದ್ರದ ಸುತ್ತ ಜಿಲ್ಲಾಧಿಕಾರಿಯವರು ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.




