Featured StoryState News

ಪ್ರಾದೇಶಿಕ ಅಸಮಾನತೆ: ಜಿಲ್ಲೆ, ತಾಲ್ಲೂಕ್ ವರ್ಗೀಕರಿಸಿ, ಹೊಸ ಅಭಿವೃದ್ಧಿ ಸೂಚ್ಯಂಕ ತಯಾರಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿ, ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿಯ ಫಲವಾಗಿ ಕಲ್ಯಾಣ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಹಾಗಾಗಿ ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಎಲ್ಲ ಮಹನೀಯರನ್ನು ಸ್ಮರಿಸುವುದಾಗಿ ಹೇಳಿದರು.

ಬಸವ ಕಲ್ಯಾಣದಲ್ಲಿ ಹೊತ್ತಿಕೊಂಡ ಶರಣರ ಚಳುವಳಿಯು ಇಡೀ ಉಪಖಂಡದ ಬೇರೆ ಬೇರೆ ಭಾಗಗಳಿಂದ ಸಮಾನತಾವಾದಿ ಆಶಯಗಳನ್ನು ಹೊಂದಿದ್ದ ಜನರನ್ನು ಒಟ್ಟುಗೂಡಿಸಿತು. ಜಾತಿ, ವರ್ಗ, ವರ್ಣ, ಲಿಂಗ ತಾರತಮ್ಯವಿಲ್ಲದ ಸಮ-ಸಮಾಜ ನಿರ್ಮಾಣದ ಆಶಯವನ್ನು ತಾತ್ಕಾಲಿಕವಾಗಿಯಾದರೂ ಈಡೇರಿಸಿತ್ತು. ಶರಣರ ವಚನ ಚಳುವಳಿಯು ಇವತ್ತಿಗೂ ಕೂಡ ಸಮಾನತಾವಾದಿ ಆಶಯಗಳನ್ನು ಹೊತ್ತ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ನಾಲ್ಕು ಮಹತ್ವದ ಹೋರಾಟಗಳನ್ನು ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ, ಕನ್ನಡ ಭಾಷಿಕರು ಒಗ್ಗೂಡುವ ಭಾಷಾವಾರು ಪ್ರಾಂತ್ಯ ರಚನೆಯ ಹೋರಾಟ ಮತ್ತು ಆರ್ಟಿಕಲ್ 371 ಜೆ ರಚನೆಗಾಗಿ ನಡೆದ ಚಳುವಳಿ. ಇವುಗಳನ್ನು ಹೊಸ ತಲೆಮಾರು ಎಂದಿಗೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button