ಹರ್ಯಾಣ ಚುನಾವಣೆ:ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್

ಹೊಸದಿಲ್ಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ(ಸೆ18) ಪ್ರಣಾಳಿಕೆ ಬಿಡುಗಡೆ ಗೊಳಿಸಿದ್ದು ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಭಾಗಿಯಾಗಿದ್ದರು. ನಾವು 7 ಗ್ಯಾರಂಟಿಗಳನ್ನು 7 ಸ್ಥರದ ಜನರಿಗಾಗಿ ಜಾರಿ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೇರಿದರೆ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ಮಾಸಿಕ 2000 ರೂ. ನೆರವು
300 ಯುನಿಟ್ ಉಚಿತ ವಿದ್ಯುತ್
ಎಲ್ ಪಿಜಿ ಗ್ಯಾಸ್ ಸಿಲಿಂಡರ್ 500 ರೂ.ಗೆ ಲಭ್ಯ
ಹಿರಿಯ ನಾಗರಿಕರಿಗೆ 6,000 ರೂ. ಪಿಂಚಣಿ. ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ
ಖಾಲಿ ಇರುವ 2 ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ
ಹರಿಯಾಣವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡಲಾಗುವುದು.
ಚಿರಂಜೀವಿ ಯೋಜನೆಯ ಮಾದರಿಯಲ್ಲಿ 25 ಲಕ್ಷ ಮಂದಿಗೆ ಉಚಿತ ಚಿಕಿತ್ಸೆ
ಬಡ ಕುಟುಂಬಗಳಿಗೆ 100 ಗಜಗಳ ನಿವೇಶನ ಹಂಚಿಕೆ
ರೈತರಿಗೆ ಕನಿಷ್ಠ ಬೆಂಬಲ ಬೆಲೆ; ಕಾನೂನುಬದ್ಧ MSP ಗ್ಯಾರಂಟಿಯನ್ನು ಖಾತ್ರಿಪಡಿಸುವುದು.

Latest Indian news

Popular Stories