‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು.

ಮೂಲಗಳ ಪ್ರಕಾರ ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ್ದರು. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

Latest Indian news

Popular Stories