ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದಿದೆ.

ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16536) ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

Latest Indian news

Popular Stories