ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ’ಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸದಸ್ಯ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆ, ಬೈಂದೂರು ತಾಲ್ಲೂಕು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಪವರ್ಗ ‘ಎ’ ಅಧಿಸೂಚಿತ ಸಂಸ್ಥೆಯಾಗಿರುತ್ತದೆ. ಈ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾಧಿಗಳಿಂದ/ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿ ಉಲ್ಲೇಖ(1)ರಲ್ಲಿ ಹೊರಡಿಸಿದ ಪುಕಟಣೆಗೆ ಸ್ಪಂದಿಸಿ ನಿಗಧಿತ ಅವಧಿಯೊಳಗೆ 66 ಅರ್ಜಿಗಳು ಸ್ವೀಕೃತವಾಗಿರುತ್ತವೆ ಎಂದಿದ್ದಾರೆ.

ದಿನಾಂಕ:03.01.2024ರಂದು ನಡೆದ 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ 2ನೇ ಸಭೆಯ ನಿರ್ಣಯದ ವಿಷಯ ಸೂಚಿ ಸಂಖ್ಯೆ (5)ರಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಡುವ ಪುವರ್ಗ ‘ಎ’ ಅಧಿಸೂಚಿತ ಸಂಸ್ಥೆಗಳಿಗೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸುವ ಅಧಿಕಾರವನ್ನು ಅಧ್ಯಕ್ಷರಿಗೆ ನೀಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ವ್ಯವಸ್ಥಾಪನ ಸಮಿತಿಗೆ ಸದಸ್ಯತ್ವವನ್ನು ಕೋರಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಸತ್ಯಾಪನೆ ಮಾಡಿ ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಮತ್ತು ಪೋಲೀಸ್‌ ಅಧೀಕ್ಷಕರು, ಉಡುಪಿ ಜಿಲ್ಲೆ ರವರು ಉಲ್ಲೇಖ(3) ಮತ್ತು (4)ರನ್ವಯ ಸತ್ಯಾಪನಾ ವರದಿಗಳನ್ನು ಸಲ್ಲಿಸಿರುತ್ತಾರೆ ಎಂದು ಹೇಳಿದ್ದಾರೆ.

ದಿನಾಂಕ:03.01.2024ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯ ನಿರ್ಣಯದಂತೆ ಉಡುಪಿ ಜಿಲ್ಲೆ, ಬೈಂದೂರು ತಾಲ್ಲೂಕು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ವ್ಯವಸ್ಮಾಪನಾ ಸಮಿತಿಯನ್ನು ರಚಿಸುವ ಬಗ್ಗೆ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ದಿನಾಂಕ:03.01.2024ರಂದು ನಡೆದ 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ 2ನೇ ಸಭೆಯ ನಿರ್ಣಯಿಸಿರುವಂತೆ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಈ ಕೆಳಕಂಡ ಒಂಭತ್ತು (9) ಮಹನೀಯರು/ಮಹಿಳೆಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಕಾಯ್ದೆ 2011ರ ಸೆಕ್ಷನ್ 25ರ ಅನ್ವಯ ಈ ಆದೇಶ ಹೊರಡಿಸಿದ ದಿನಾಂಕದಿಂದ ಮೂರು (3) ವರ್ಷಗಳ ಅವಧಿಗೆ ಕೆಳಕಂಡ ಷರತ್ತಿಗೊಳಪಡಿಸಿ ರಚಿಸಿ ಆದೇಶ ಹೊರಡಿಸಿದ್ದಾರೆ.

ಹೀಗಿದೆ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಹೆಸರು

ಮಹಾಲಿಂಗ ವೆಂಕನಾಯ್ಕ್ – ಪರಿಶಿಷ್ಟ ಪಂಗಡ
ಧನಾಕ್ಷಿ – ಮಹಿಳೆ
ಸುಧಾ.ಕೆ – ಮಹಿಳೆ
ಕೆ.ಬಾಬು ಶೆಟ್ಟಿ – ಸಾಮಾನ್ಯ
ಸುರೇಂದ್ರ ಶೆಟ್ಟಿ – ಸಾಮಾನ್ಯ
ಅಭಿಲಾಷ್ – ಸಾಮಾನ್ಯ
ಯು.ರಾಜೇಶ ಕಾರಂತ್ – ಸಾಮಾನ್ಯ
ರಘುರಾಮ ದೇವಾಡಿಗ – ಸಾಮಾನ್ಯ

ಷರತ್ತುಗಳು:-

1, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಅಧಿನಿಯಮ 2011ರ ಸೆಕ್ಷನ್ 25(3) ಮತ್ತು (4)ರ ಅನರ್ಹತೆಗಳೊಂದಿಗೆ ಹಾಗೂ ಕಾಯ್ದೆಯ (2ನೇ ತಿದ್ದುಪಡಿ) కలం 25(2)() ಅನ್ವಯ “ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಯಾಗಿರುವುದು ಕಂಡು ಬಂದಲ್ಲಿ ಅಂತಹವರ ಸದಸ್ಯತ್ವವು ಸಹಜವಾಗಿಯೇ ರದ್ದಾಗುವುದು”.

2. ಸದರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯೆಂದು ನೇಮಿಸಲಾಗಿದೆ.

3. ಮೇಲ್ಕಂಡ ಸದಸ್ಯರು ಪ್ರಥಮ ಸಭೆಯಲ್ಲಿ ತಮ್ಮಲ್ಲಿ ಒಬ್ಬರನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಈ ಕಛೇರಿಗೆ ನಡವಳಿಯನ್ನು ಸಲ್ಲಿಸುವುದು.

4. ವ್ಯವಸ್ಥಾಪನಾ ಸಮಿತಿ ಸದಸ್ಯರ ವಿರುದ್ಧ ಯಾವುದಾದರೂ ಕ್ರಿಮಿನಲ್ ಪ್ರಕರಣಗಳು ಇರುವುದು ಕಂಡುಬಂದಲ್ಲಿ ಅಂತವರಿಗೆ ಈ ವ್ಯವಸ್ಥಾಪನಾ ಸಮಿತಿಯ ಆದೇಶವು ತನ್ನಂತಾನೇ ರದ್ದಾಗುತ್ತದೆ.

5. ಸುರೇಂದ್ರಶೆಟ್ಟಿ ಬಿನ್ ರಮೇಶ್‌ಶೆಟ್ಟಿ ಎಂಬುವವರ ವಿರುದ್ಧ ಕುಂದಾಪುರ ಪೋಲೀಸ್ ಠಾಣಾ ಅ.ಕ್ರ ಸಂ.56/2018, ಕಲಂ 504, 353, 332, 341 ಜೊತೆಗೆ 34 ಐಪಿಸಿ ರಂತೆ ಹಾಗೂ ಬೆಂಗಳೂರಿನ ಆರ್ ಟಿ ನಗರ ಪೋಲೀಸ್ ಠಾಣೆಯಲ್ಲಿ ಅಕ್ರ ಸಂ.255/2019, ಕಲಂ 507, 406, 420 ಐಪಿಸಿ ಪ್ರಕರಣ ದಾಖಲಾಗಿದ್ದು, ಸದರಿ ಪುಕರಣದಲ್ಲಿ ಒಂದು ವೇಳೆ ನ್ಯಾಯಾಲಯದಲ್ಲಿ ಅವರು ಅಪಾಧಿತರೆಂದು ತೀರ್ಪು ಬಂದಲ್ಲಿ ಅವರ ಸದಸ್ಯತ್ವವು ತನ್ನಂತಾನೇ ರದ್ದಾಗಲಿದೆ ಎಂದಿದೆ

Latest Indian news

Popular Stories