ಐಪಿಎಸ್​ ಅಧಿಕಾರಿ ರಮಣ್ ಗುಪ್ತಾಗೆ ತೀವ್ರ ಅನಾರೋಗ್ಯ, ಮಣಿಪಾಲ್ ಆಸ್ಪತ್ರೆಗೆ ದಾಖಲು; ಇಷ್ಟಕ್ಕೂ ಏನಾಗಿದೆ?

ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ರಮಣ್ ಗುಪ್ತಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಬೆಂಗಳೂರಿನ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೆಪ್ಟೆಂಬರ್​​ 16ರ ಸೋಮವಾರದಂದು ಮನೆಯಲ್ಲಿ ಕುಸಿದು ಬಿದ್ದಿದ್ದ ಕಾರಣ ಕುಟುಂಬಸ್ಥರು ತಕ್ಷಣವೇ ಹೆಬ್ಬಾಳದ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದರು. ಬೆನ್ನುನೋವು ಮತ್ತು ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಲು ಕಾರಣ ಏನೆಂಬುದು ತಿಳಿದು ಬಂದಿಲ್ಲ. ಚಿಕಿತ್ಸೆ ಮುಂದುವರೆದಿದೆ.

ಗೃಹ ಸಚಿವ ಡಾ ಜಿ. ಪರಮೇಶ್ವರ್ ಅವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಮತ್ತಿತ್ತರ ಅಧಿಕಾರಿಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ರಮಣ್ ದೀಪ್ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಪತ್ರೆ ವೈದ್ಯರಿಂದ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Latest Indian news

Popular Stories