ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ

ಆಂಧ್ರ ಪ್ರದೇಶದ ತಿರುಪತಿ ದೇವಾಲಯದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಚರ್ಬಿ ಮಿಶ್ರಣವಾಗುತ್ತಿರುವ ಸುದ್ದಿ ಸ್ಫೋಟಗೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದ್ದಾರೆ. ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಧಾರ್ಮಿ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಪ್ರತಿಯನ್ನು ಕಳುಹಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ತಿರುಪತಿಗೆ ರಾಜ್ಯದ ನಂದಿನಿ ತುಪ್ಪ ಸರಬರಾಜಾಗುತ್ತಿಲ್ಲ. ಈ ಟೆಂಡರ್‌ ಖಾಸಗಿ ಕಂಪನಿಗಳ ಪಾಲಾಗಿದೆ. ಇಡೀ ದೇಶದಲ್ಲಿ ನಂದಿನಿ ತುಪ್ಪ ಶುದ್ದ ಎಂಬ ಖ್ಯಾತಿಗೆ ಪಾತ್ರವಾಗಿದೆ.

Latest Indian news

Popular Stories