ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿದ ಸರ್ಕಾರ

ಬೆಂಗಳೂರಿನ ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ಧದ ಪ್ರಕರಣಗಳ‌ ತನಿಖೆಗೆ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನರನ್ನು ನಿನ್ನೆ ಮತ್ತೆ ಪೊಲೀಸರು ಅತ್ಯಾಚಾರ ಆರೋಪದಲ್ಲಿ ಬಂಧಿಸಿದ್ದರು.

ಶಾಸಕ ಮುನಿರತ್ನ ಜಾತಿ ನಿಂದನೆ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟಿದ್ದರು. ವಂಚನೆ ಪ್ರಕರಣದಲ್ಲೂ ಬಚಾವ್ ಆಗಿದ್ದರು. ಎರಡೆರಡು ಕೇಸ್​ಗಳಲ್ಲಿ ಜಾಮೀನು ಕೂಡ ಸಿಕ್ಕಿತ್ತು. ಇನ್ನೇನು ಹೊರಗೆ ಬರಬೇಕು ಎನ್ನುವಷ್ಟರಲ್ಲಿ ನಿನ್ನೆ ಅತ್ಯಾಚಾರ ಪ್ರಕರಣದ ಸುರುಳಿ ಸುತ್ತಿಕೊಂಡಿತ್ತು. ಇದೀಗ ಸಂತ್ರಸ್ತ್ರೆ ಕೊಟ್ಟ ದೂರು ಮುನಿರತ್ನರನ್ನ ಜೈಲಿಗಟ್ಟಿದೆ.

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮುನಿರತ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗುತ್ತಿದ್ದಂತೆ ಜಡ್ಜ್ ಅನೇಕ ಪ್ರಶ್ನೆ ಕೇಳಿದ್ದರು. ನಿಮ್ಮ ಹೆಸರು ಏನು, ಎಲ್ಲಿ ಬಂಧಿಸಿದರು ಅಂತಾ ಕೇಳಿದ್ದಾರೆ. ಇದಕ್ಕೆ ಉತ್ತರ ಕೊಟ್ಟ ಮುನಿರತ್ನ ತಮ್ಮ ವಿವರವನ್ನ ಹಂಚಿಕೊಂಡಿದ್ದಾರೆ.

ವಿಚಾರಣೆ ಬಳಿಕ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇನ್ನು ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆ ಮೂಲಕ ಎಲ್ಲಿಂದ ಹೊರಬಂದ್ರೋ ಮತ್ತೆ ಅಲ್ಲಿಗೆ ಮರಳಿದ್ದಾರೆ.

Latest Indian news

Popular Stories