Bidar

ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೀದರ ಮೇ 06 (ಕ.ವಾ.): ನಗರಸಭೆ ಬೀದರ ಎಸ್.ಎಫ್.ಸಿ.(ಮುಕ್ತನಿಧಿ) 2019-20 ಮತ್ತು 2020-21ನೇ ಸಾಲಿನ ಶೇ.024.10, ಶೇ.7.25 ಯೋಜನೆಯಡಿ ವೈಯಕ್ತಿಕ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡಜನರ ವಿದ್ಯಾರ್ಥಿಗಳಿಗೆ ಸಹಾಯ ಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನÀಗರಸಭೆಯ ವೆಬ್‌ಸೈಟ್ ವಿಳಾಸ ತಿತಿತಿ.biಜಚಿಡಿಣoತಿಟಿ.gov.iಟಿ ನಲ್ಲಿ ಹಾಗೂ ಕಚೇರಿ ನಾಮಫಲಕದಲ್ಲಿ ವಿವರಗಳನ್ನು ನೋಡಬಹುದು. ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ನಗರಸಭೆಯಲ್ಲಿ ಪಡೆದುಕೊಂಡು ಅಗತ್ಯ ವಿವರಗಳನ್ನು ಭರ್ತಿ ಮಾಡಿ ದಾಖಲಾತಿಗ¼ನ್ನು ಫಲಾನುಭವಿಗಳು ಮೇ 20ರ ಮಧ್ಯಾಹ್ನ 12 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಲು ಸೂಚಿಸಿದೆ ಮತ್ತು ಅಪೂರ್ಣ ಅರ್ಜಿಗಳನ್ನು ರದ್ದುಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ವಿಕಲಚೇತನರಿಗೆ ಅವಕಾಶ
ಬೀದರ ಮೇ 06 (ಕ.ವಾ.): ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿರುವ ಎಲ್ಲಾ 18 ವರ್ಷ ಮೇಲ್ಪಟ್ಟ ವಿಕಲಚೇತನರು ಕೋವಿಡ್-19ಗೆ ಸಂಬAಧಿಸಿದ ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಅಗತ್ಯವಿದೆ.
18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು (ಕೋ-ವಿನ್) ಆಪ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿ ಮಾಡಿಕೊಂಡು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕರನ್ನು ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಬೀದರ ವತಿಯಿಂದ ನೇಮಿಸಿರುವ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿ.ಆರ್.ಡ್ಬೂ÷್ಲ (ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡ್ಬೂ÷್ಲ(ನಗರ ಪುನರ್ವಸತಿ ಕಾರ್ಯಕರ್ತರು) ಮತ್ತು ಪ್ರತಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡ್ಬೂ÷್ಲ(ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು)ಗಳಾದ ಬಸವರಾಜ-9611590832, ಬಾಬುರಾವ್-9880801991, ಶಿವಕುಮಾರ-8431574070, ಸುನೀಲ್-9741166275 ಇವರುಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲ ಕಚೇರಿ ಬೀದರ-ದೂರವಾಣಿ ಸಂಖ್ಯೆಗೆ 08482-234647, 08482-234900ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button