
ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ; ಶಾಸಕ ಸತೀಶ್ ಸೈಲ್
ಕಾರವಾರ : ಉತ್ತರ ಕನ್ನಡ ಜಿಲ್ಲೆಯು ಆಕರ್ಷಿಕ ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು ಮುಂದಿನ ದಿನಗಳಗಲ್ಲಿ ಅತ್ಯಾಕರ್ಷಣೆಯ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಪ್ರವಾಸಿಗರ ಆಕರ್ಷಿಸಲು ಗೋವಾ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.
ಅವರು ಕಾರವಾರದ ರವೀಂದ್ರನಾಥ್ ಠಾಗೋರ್ ಕಡಲ ತೀರದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆದ ಗಾಳಿ ಪಟ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ.27 ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.
ಗೋವಾ ಬೀಚ್‌ಗಳಿಗಿಂತ ಪ್ರಾವಸೋದ್ಯಮಕ್ಕೆ ಪೂರಕವಾದ ಬೀಚ್‌ಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಗೋವಾದಲ್ಲಿ ಪ್ರವಾಸೋದ್ಯಮ ಅಬಿವೃದ್ಧಿ ಹೊಂದಲು ಸಿ.ಆರ್.ಝಡ್ ಅನುಮತಿ ಪಡೆದು ಬೀಚ್‌ಗಳನ್ನು ಅಭಿವೃದ್ಧಿ ಪಡಿಸಿ ಸ್ಥಳೀಯ ವ್ಯಾಪರಸಸ್ಥರಿಗೆ ಉದ್ಯೋಗ ನೀಡುವ ಮೂಲಕ ಸ್ಥಳೀಯ ಸಾಂಪ್ರದಾಯಕ ವಸ್ತಗಳನ್ನು ಪ್ರವಾಸಿಗರಿಗೆ ತಿಳಿಸುವ ಮುಖಾಂತರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಮಾತನಾಡಿ, ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಪ್ರವಸೋದ್ಯಮ ಇಲಾಖೆ ವತಿಯಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ, ಹಾಗೂ ಮರಳು ಶಿಲ್ಪಿ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿದೆ ಈ ಕಾರ್ಯಕ್ರಮಗಳಲ್ಲಿ ಉತ್ಸಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಕಂಡು ಸಂತಸ ವ್ಯಕ್ತ ಪಡಿಸಿದರು.
ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ ಇಲ್ಲಿಗೆ ಆಗಮಿಸುವ ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಲು ಕಾಫಿ ಟೇಬಲ್ ಬುಕ್ ಮಾಡಲು ನಿರ್ಧರಿಸಲಾಗಿದೆ ಇದರ ಕವರ್ ಪೇಜ್ ನಾಳೆಯ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜಯಂತ್ ಇತರರು ಉಪಸ್ಥಿತರಿದ್ದರು.
….




