Madikeri

ಕೊಪ್ಪ ಚೆಕ್‌ಪೋಸ್ಟ್ ಗೆ ಮೈಸೂರು ಎಸ್‌ಪಿ ಭೇಟಿ : ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ

ಮಡಿಕೇರಿ ಮೇ ೧೨ : ರಾಜ್ಯದಲ್ಲಿ ೧೪ ದಿನಗಳ ಕಾಲ ವಿಧಿಸಿರುವ ಲಾಕ್‌ಡೌನ್‌ನಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹೀಗಾಗಿ ಕೆಲವು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅನಗತ್ಯವಾಗಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳನ್ನು ಮುಟ್ಟುಗೋಲು ಹಾಕುವುದಲ್ಲದೇ, ಪ್ರಕರಣ ದಾಖಲಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಕೆ ನೀಡಿದ್ದಾರೆ.
ಕೊಡಗು, ಮೈಸೂರು ಗಡಿಭಾಗದ ಕುಶಾಲನಗರÀ ಕೊಪ್ಪ ಗಡಿ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಅಲ್ಲಿನ ಕಾನೂನು ಸುವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಅವರು ಸ್ಥಳದಲ್ಲಿದ್ದ ಅಧಿಕಾರಿಗಳ ಜೊತೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ಎಸ್‌ಪಿ ಚೆಕ್ ಪೋಸ್ಟ್ಗಳ ಮೂಲಕ ಹಾದು ಹೋಗುವ ಸರಕು ಸಾಗಾಣ ಕೆ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತಿದೆ. ಚೆಕ್ ಪೋಸ್ಟ್ಗಳಲ್ಲಿ ಸರಕು ಸಾಗಾಣ ಕೆ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಇನ್ನುಳಿದ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಲಾಗುತ್ತಿದ್ದು, ಯಾವುದೇ ವಾಹನಕ್ಕೆ ತಪಾಸಣೆಯಿಂದ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಾಹನ ತಪಾಸಣೆ ಸಂದರ್ಭ ಟ್ರಾಫಿಕ್ ಜಾಮ್ ಆಗುತ್ತದೆ. ಆದರೆ ವಾಹನಗಳ ತಪಾಸಣೆ ಅನಿವಾರ್ಯವಾಗಿದೆ ಎಂದು ರಿಷ್ಯಂತ್ ಹೇಳಿದರು. ಚೆಕ್ ಪೋಸ್ಟ್ಗಳಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪೊಲೀಸರು ಕೂಡ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚೆಕ್ ಪೋಸ್ಟ್ಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಗಳಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಇಲಾಖೆ ಮೂಲಕ ಒದಗಿಸಲಾಗುತ್ತದೆ ಎಂದು ಎಸ್.ಪಿ. ರಿಷ್ಯಂತ್ ಹೇಳಿದರು.
ಕೆಲವು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಪ್ರತಿ ನಿತ್ಯ ಅಂತರ್ ಗಡಿ ಮೂಲಕ ಸಂಚಾರ ನಡೆಸುತ್ತಿದ್ದು, ಅವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದರು.
ಇನ್ನು ಕೃಷಿ ಚಟುವಟಿಕೆಗಳಿಗಾಗಿ ಕೆಲವರು ಚೆಕ್ ಪೋಸ್ಟ್ ಮೂಲಕ ಸಂಚರಿಸುವ ಅನಿವಾರ್ಯತೆ ಇದೆ. ಅಂತಹ ವ್ಯಕ್ತಿಗಳು ಕಳೆದ ವರ್ಷದಂತೆ ಈ ಬಾರಿಯೂ ಜಮೀನಿನ ದಾಖಲೆಗಳನ್ನು ತೋರಿಸಿ ತಮ್ಮ ಹೊಲ, ಗದ್ದೆ, ತೋಟಗಳಿಗೆ ತೆರಳಬಹುದು ಎಂದು ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದರು.

ವಾಹನಗಳ ಸಂಚಾರ, ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಂಖ್ಯೆ, ಹೊರ ಭಾಗದಿಂದ ಬರುತ್ತಿರುವವರ ಮಾಹಿತಿ ಸಂಗ್ರಹ ಮತ್ತಿತ್ತರ ವಿಚಾರಗಳ ಬಗ್ಗೆ ಮಾಹಿತಿ ಪಡೆದರು. ಫೋಟೋ :: ಮೈಸೂರು ಎಸ್‌ಪಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button