Crime

ಸುಳ್ಯ: ಹೊಳೆಗೆ ಬಸ್ ಬಿದ್ದು ಚಾಲಕ ಮೃತ್ಯು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ‌ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಭರತ್ (28) ಮೃತ ಬಸ್ ಚಾಲಕ.

ಘಟನೆಯ ವೇಳೆ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಲ್ಲದ ಪರಿಣಾಮ ತಪ್ಪಿದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button