Crime

ರಾಯಚೂರು: ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಯಚೂರು,ಅ.07:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3,00,000 ರೂಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ C.E.T/NEET ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6,00,000 ರೂಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.
ಸೂಚನೆ:-ಮಹಿಳೆಯರಿಗೆ – ಶೇ.33ರಷ್ಟು ಮತ್ತು ವಿಶೇಷಚೇತನರಿಗೆ – ಶೇ.5ರಷ್ಟು ಮೀಸಲಾತಿ ಇರುತ್ತದೆ. ನವೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಂ: 1-8-130/189, ಸಂತೋಷಿ ಮಾತಾ ಗುಡಿ ಹತ್ತಿರ, ಬೊಮ್ಮನವಾಡಿ, ಉಮಾ ಹೋಟೆಲ್ ಎದುರುಗಡೆ, ಸ್ಟೇಶನ ರಸ್ತೆ, ರಾಯಚೂರು ದೂ. ಸಂ: 08532-250440ಗೆ ಸಂಪರ್ಕಿಸಬೇಕು. ನಿಗಮದ ಸಹಾಯವಾಣಿ: +91 9448451111, ಇ-ಮೇಲ್: [email protected]. ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ನಿಂದ ಪಡೆಯಬಹದಾಗಿದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಣೆಯಾಗಿರಬೇಕೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button