
ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ : ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಕಾರವಾರ : ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಕಾರವಾರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. ಅಂಬೇಡ್ಕರ್ ಸರ್ಕಲ್ ದಿಂದ ಜಿಲ್ಲಾಧಿಕಾರಿ ಕಚೇರಿತನಕ ಮೆರವಣಿಗೆಯಲ್ಲಿ ಬಂದ ಹೋರಾಟ ಸಮಿತಿ ಸದಸ್ಯರು ಹಾಗೂ ದಲಿತ ಕುಟುಂಬದವರು ಜಿಲ್ಲಾಧಿಕಾರಿ ಕಚೇರಿ ಹೊರಗೆ ಸಾಂಕೇತಿಕ ಧರಣಿ ನಡೆಸಿದರು.
ಒಳ ಮೀಸಲಾತಿ ಹೋರಾಟ ಸಮಿತಿಯ ಸಂಚಾಲಕ ಬಸವರಾಜ ಮಾತನಾಡಿ ಇದೇ ಆಗಸ್ಟ್ ಒಂದರಂದು ಸರ್ವೋಚ್ಚ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣ ಪೀಠವು ಎಸ್ಸಿ, ಎಸ್ಟಿ. ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ಪೀಠವು ತೀರ್ಪು ನೀಡಿದೆ.ಸುಪ್ರೀಂ ತಿರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಮೀಸಲಾತಿಯ ಯಶಸ್ಸು ಇರುವುದೇ ಅದನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವದರಲ್ಲಿ, ಮೀಸಲಾತಿಯನ್ನು ಪರಿಣಾಮಕಾರಿಗೊಳಿಸುವ ಹಲವು ಸಾಧ್ಯತೆಗಳಲ್ಲಿ ಒಳಮೀಸಲಾತಿಯು ಒಂದು. ಒಳಮೀಸಲಾತಿಗಾಗಿ ಕರ್ನಾಟಕದಲ್ಲಿ ಮೂರು ದಶಕಗಳ ನಿರಂತರ ಹೋರಾಟ ನಡೆದಿದೆ. ಒಳಮೀಸಲಾತಿ ಹೋರಾಟದ ಬಗ್ಗೆ ಪ್ರಸ್ತುತ ಸರಕಾರವು ಕೇವಲ ಸಹಾನುಭೂತಿ ತೋರಿಸುತ್ತದೆ ನಿಜ. ಸಹಾನಭೂತಿ ಕ್ರಿಯಾತ್ಮಕ ರೂಪ ಪಡೆಯದಿದ್ದರೆ ಅಪ್ರಯೋಜಕ ಎಂದು ಅವರು ನುಡಿದರು.
ಪ್ರಮುಖ ಬೇಡಿಕೆಗಳು :
ಕೋರ್ಟ್ ತೀರ್ಪು ನೀಡಿದಂತೆ ಒಳಮೀಸಲಾತಿ ಜಾರಿಗೊಳಿಸಬೇಕು . 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 6 ನೇ ಗ್ಯಾರಂಟಿಯಾದ ಒಳಮೀಸಲಾತಿ ಕಲ್ಪಿಸಿಕೊಡಬೇಕು.ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕಲಾಗ್ ಹುದ್ದೆಗಳನ್ನು ಮತ್ತೆ ಇತರೆ ನೇಮಕಾತಿಗಳನ್ನು ರದ್ದು ಪಡಿಸಬೇಕು.
ಜಾತಿ ಜನಗಣತಿ ವರದಿ ಮುನ್ನೆಲೆಗೆ ತಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ದ ಗೊಂದಲ ಸೃಷ್ಠಿಸುವ ಜಾತಿ ಜನಗಣತಿ ವರದಿಯನ್ನು ಕೈಬಿಟ್ಟು ,ಮೊದಲು ಒಳಮೀಸಲಾತಿ ಜಾರಿಗೊಳಿಸಲು ಪ್ರತಿಭಟನಾಕಾರರು ಆಗ್ರಹಿಸಿದರು.
…..




