
ರಾಯಚೂರು: ಜಿಲ್ಲೆಯಲ್ಲಿಂದು 126 ಕೋವಿಡ್-19 ದೃಢ
ರಾಯಚೂರು,ಅ.7:- ಜಿಲ್ಲೆಯಲ್ಲಿ ಅ.7ರ ಬುಧವಾರ ಕೋವಿಡ್-19ನ 126 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದೂವರೆಗೆ 12,220 ಮಂದಿಗೆ ಕೊರೋನಾ ಸೋಂಕು ವರದಿಯಾಗಿದ್ದು, ಇಂದು 230 ಜನರು ಸೇರಿದಂತೆ ಇದೂವರೆಗೆ ಒಟ್ಟಾರೆ 10,745 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ 110, ಲಿಂಗಸೂಗೂರು ತಾಲೂಕಿನಿಂದ 138, ಮಾನ್ವಿ ತಾಲೂಕಿನಿಂದ 103, ಸಿಂಧನೂರು ತಾಲೂಕಿನಿಂದ 121 ಮತ್ತು ರಾಯಚೂರು ತಾಲೂಕಿನಿಂದ 177 ಸೇರಿದಂತೆ ಒಟ್ಟು 649 ಜನರ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ 1,815 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 1,27,469 ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 1,12,943 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,657 ಸ್ಯಾಂಪಲ್ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್ಗಳಲ್ಲಿಂದು 711 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 22, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 14, ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 13 ಹಾಗೂ ದೇವದುರ್ಗ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 11 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.




