ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಆಯತಪ್ಪಿ ಕಾಲೇಜು ಕಟ್ಟಡದಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಆಫ್ರಿನ್ ಜಾಮದಾರ್ (17) ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ ಕುರುಬೇಟ್ ಗ್ರಾಮದವಳಾಗಿದ್ದಾಳೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ