ನವದೆಹಲಿ : ಉತ್ತರ ಪ್ರದೇಶದ ಸಿಕಂದರಾಬಾದ್ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬುಲಂದ್ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ರಾತ್ರಿ 8:30-9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ 18-19 ಜನರಿದ್ದರು, ಎಂಟು ಜನರನ್ನು ರಕ್ಷಿಸಲಾಗಿದ್ದು, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಂಡ, ಮುನ್ಸಿಪಲ್ ಕಾರ್ಪೊರೇಷನ್ ತಂಡ, ವೈದ್ಯಕೀಯ ತಂಡ, ಎನ್ಡಿಆರ್ಎಫ್ ತಂಡ ಸ್ಥಳದಲ್ಲಿದೆ.
ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೋನಿಯಲ್ಲಿ ಸಂಭವಿಸಿದ ಸ್ಫೋಟದಿಂದ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.