CrimeFeatured StoryState News

ಎಸ್​ಎಂ ಕೃಷ್ಣ ಅವರ ನಿಧನ | ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ – ನಾಳೆ ಸರಕಾರಿ ರಜೆ

ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.

ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button