
Featured StoryState News
ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಆರೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಸಿಟಿ ರವಿ ಅವರನ್ನು ಬಂಧನವಾಗಿದೆ. ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಇನ್ನು ಸೆಕ್ಷನ್ 75-ಲೈಂಗಿಕ ಬಣ್ಣದ ಟೀಕೆಗೆ 1 ವರ್ಷದವರೆಗೆ ಸೆರೆವಾಸ ಅಥವಾ ದಂಡ ಹಾಗೂ ಸೆಕ್ಷನ್79 ಪದಪ್ರಯೋಗ ಅಥವಾ ಸಂಜ್ಙೆಗಳ ಮೂಲಕ ಮಹಿಳೆಯ ಗೌರವಕ್ಕೆ ಧಕ್ಕೆಗೆ 3 ವರ್ಷದವರೆಗೆ ಸೆರೆವಾಸ ಮತ್ತು ದಂಡ ವಿಧಿಸಬಹುದು.




