Featured StoryUttara Kannada

ಚೆಸ್ ನಿಂದ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿ ಹೆಚ್ಚಳ : ಶಾಸಕ ಸೈಲ್

ಕಾರವಾರ : ಬಾಲ್ಯದಿಂದಲೇ ಚೆಸ್ ಆಡುವುದರಿಂದ ಮಕ್ಕಳಲ್ಲಿ ಕಲಿಕೆ, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಂದ ವಯೋವೃದ್ಧರವರೆಗೂ ಚೆಸ್ ಪಾರ್ಕ್ನ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲೆಂಟ್ ಆಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಸೈಲ್ ಹೇಳಿದರು.

ಅವರು ಸೋಮವಾರ , ಚಿತ್ತಾಕುಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಆವರಣದಲ್ಲಿ ಚಿತ್ತಾಕುಲಾ ಗ್ರಾಮ ಪಂಚಾಯತ ಸಹಯೋಗದಿಂದ ಚಿತ್ತಾಕುಲ ಚೆಸ್ ಕ್ಲಬ್ ಉದ್ಘಾಟಿಸಿ ಮಾತನಾಡಿದರು.

ಚೆಸ್ ಆಡುವ ಮೂಲಕ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದ್ದು, ಸ್ಥಳೀಯ ಎಲ್ಲಾ ವಯೋಮಾನದವರು ಈ ಪಾರ್ಕ್ಗೆ ಬಂದು ಚೆಸ್ ಆಡುವ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಮಾತನಾಡಿ ಚೆಸ್ ಪಾರ್ಕ್ ನ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ ಮೈಂಡ್ ಗೇಮ್ ಆಟವಾಗಿದ್ದು, ಯಾವ ಹಂತದಲ್ಲಿ ಯಾವ ಕಾಯಿ ಮುನ್ನೆಡಸಬೇಕು, ಯಾವ ರೀತಿ ಆಡಬೇಕು ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ. ಈ ಆಟ ಜೀವನಕ್ಕೂ ಅನ್ವಯವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಮಾತನಾಡಿ, ಆಡಳಿತ ವ್ಯವಸ್ಥೆಯಲ್ಲಿ ಎಲ್ಲರ ಸಹಕಾರವಿದ್ದಾಗ ಮಾತ್ರ ವಿನೂತನ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯ ರೂಪಕ್ಕೆ ತರಲು ಸಾಧ್ಯ. ಎಲ್ಲರ ಸಹಕಾರದಿಂದ ಚೆಸ್ ಪಾರ್ಕ್ ನಿರ್ಮಾಣವಾಗಿದೆ ಎಂದರು.
ಚೆಸ್ ಕ್ರೀಡೆಗೆ ಉತ್ತೇಜನ ನೀಡಲು ಜಿಲ್ಲೆಯ ದಾಂಡೇಲಿಯ ಅಂಬೇವಾಡಿ, ಹೆಗಡೆ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಚೆಸ್ ಪಾರ್ಕ್ ನಿರ್ಮಾಣವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ, ಕನಿಷ್ಕ ಸೋಮಶೇಖರ ಮೆಸ್ತಾ, ವೀರನಗೌಡ, ಚಿತ್ತಾಕುಲ ಪಂಚಾಯತ ಅಧ್ಯಕ್ಷ ನಿತೀನ ಬಾಂದೇಕರ, ಉಪಾಧ್ಯಕ್ಷ ಸೂರಜ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.

…

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button