Kodagu

ಕೊಡವರ ಬೃಹತ್ ಪಾದಯಾತ್ರೆ ಸಮಾರೋಪ : ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಅಖಿಲ ಕೊಡವ ಸಮಾಜ

ಕೊಡಗು:
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು

ಕಳೆದ ಐದು ದಿನ 78 ಕಿಲೋಮೀಟರ್ ಕ್ರಮಿಸಿ ಮಡಿಕೇರಿಗೆ ತಲುಪಿದ ಬೃಹತ್ ಪಾದಯಾತ್ರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು ಸಾಂಪ್ರದಾಯಿಕ ಉಡಿಗೆಯಲ್ಲಿ ಮಹಿಳೆಯರು,ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದರು.

ಕೊಡಗಿನ ವಿವಿದ ಕಡೆಗಳಿಂದ ಹಾಗೂ ಬೆಂಗಳೂರು ಮೈಸೂರು ಹಾಸನ ಚಿಕ್ಕಮಂಗಳೂರು, ಮತ್ತಿತರ ಕಡೆಗಳಿಂದ ಅಸಂಖ್ಯ ಕೊಡವರು ಹಾಗೂ ಭಾಷಿಕ ಜನಾಂಗದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button