Bidar

2021-22 ನೇ ಸಾಲಿನ ಡಿಪ್ಲೋಮಾ ಕೋರ್ಸ್ ಶೈಕ್ಷಣಿಕ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ ಜೂನ್ 16 (ಕರ್ನಾಟಕ ವಾರ್ತೆ):- 2021-22ನೇ ಸಾಲಿನ 2ನೇ ವರ್ಷದ (ಲ್ಯಾಟರಲ್ entry ) ಡಿಪ್ಲೋಮಾ ಕೋರ್ಸ್ ಗೆ ಅರ್ಜಿಯನ್ನು ಅಹ್ವಾವನಿಸಲಾಗಿದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (DPT) – 2 year , ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT)- 2 year ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಪಿ.ಯು.ಸಿ (ವಿಜ್ಞಾನ) ಅಥವಾ ITI (Fitter, Turner, Machinist, Draftsman) ಪರೀಕ್ಷೆಯಲ್ಲಿ ಹಾಜರಾದವರು, ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿರುತ್ತಾರೆ.
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗೆ; ದೂ. 0821-2510618, ಮೊ.9480253024, 9141075968 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button