Featured StoryState News

ಬಹುಮತವಿದ್ದರೂ ಅಧಿಕಾರ ಕಳೆದುಕೊಂಡ ಬಿಜೆಪಿ !

ಯಾದಗಿರಿ: ಸುರಪುರ ತಾಲ್ಲೂಕಿನ ಕೆಂಭಾವಿ ಪುರಸಭೆಗೆ (Kembhavi Municipality) ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ (BJP) ಸ್ಪಷ್ಟ ಬಹುಮತದ ಹೊರತಾಗಿಯೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಇಲ್ಲಿ 23 ಸ್ಥಾನಗಳ ಪೈಕಿ ಕೇವಲ 8 ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ (Congress) ಪಕ್ಷ ಅಧ್ಯಕ್ಷರನ್ನು ನೇಮಿಸುವಲ್ಲಿ ಯಶಸ್ವಿಯಾಗಿದೆ.

ಹೌದು, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಪ್ರತಿಯೊಂದು ಚುನಾವಣೆಯನ್ನೂ ಅತ್ಯಂತ ಪ್ರತಿಷ್ಟೆಯಾಗಿ ತೆಗೆದುಕೊಂಡಿದೆ. ಅದರಂತೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೆಂಭಾವಿ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ನೇಮಕದಲ್ಲೂ ಕಾಂಗ್ರೆಸ್ ಚಾಣಾಕ್ಷತನ ಮೆರೆದಿದೆ. ಪುರಸಭೆಯ ಒಟ್ಟು 23 ಸದಸ್ಯರ ಪೈಕಿ 13ರಲ್ಲಿ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಹೊಂದಿದ್ದ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.

23 ವಾರ್ಡ್ ಹೊಂದಿರುವ ಕೆಂಭಾವಿ ಪುರಸಭೆ, ಅದರಲ್ಲಿ 13 ಸದಸ್ಯರ ಬಲ ಹೊಂದಿತ್ತು. ಆದ್ರೂ ಕೂಡ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ವಿಫಲವಾಗಿದೆ. ಕಾಂಗ್ರೆಸ್ ನಿಂದ ಪುರಸಭೆ ಅಧ್ಯಕ್ಷರಾಗಿ ರಹೀಮನ್ ಪಟೇಲ್ ಆಯ್ಕೆಯಾಗಿದ್ದಾರೆ. ಸಚಿವ ಶರಣಬಸಪ್ಪ ದರ್ಶನಾಪುರ ಅವರು ಚಾಣಾಕ್ಷತನ ಮೆರೆದಿದ್ದು, ಅವರ ಚಾಣಾಕ್ಷತನದಿಂದಾಗಿ ಕಾಂಗ್ರೆಸ್‌ಗೆ ಅಧ್ಯಕ್ಷ ಗಿರಿ ಒಲಿದಿದೆ. ಆಂತರಿಕ ಬಿಕ್ಕಟ್ಟಿನಿಂದಾಗಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಕಳೆದುಕೊಂಡಿದೆ. ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಪೊಲೀಸ್ ಬಿಗಿ ಭದ್ರತೆ ಆಯೋಜಿಸಲಾಗಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button