
Crime
ಕಸದ ತೊಟ್ಟಿಯಲ್ಲಿ ಕೋಟಿ ರೂ. ಚಿನ್ನ !
ಕಣ್ಣೂರು: ಕೇರಳದ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸದ ತೊಟ್ಟಿಯಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಲಾಗಿದೆ.
ಏರ್ಪೋರ್ಟ್ನಲ್ಲಿ ಸ್ವಚ್ಛತಾ ಕಾರ್ಯದ ವೇಳೆ ಡಸ್ಟ್ ಬಿನ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಚಿನ್ನದ ಗಟ್ಟಿ ಕಂಡುಬAದಿದೆ. ತಕ್ಷಣವೇ ಅಲ್ಲಿನ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ. ಚಿನ್ನ ಕಳ್ಳಸಾಗಣೆ ಮಾಡುವ ಆರೋಪಿಗಳು ತಪ್ಪಿಸಿಕೊಳ್ಳುವ ಧಾವಂತದಲ್ಲಿ ಡಸ್ಟ್ ಬಿನ್ ನಲ್ಲಿ ಚಿನ್ನ ಅಡಗಿಸಿಟ್ಟಿರಬಹುದೆಂದು ಹೇಳಲಾಗಿದೆ.




