Crime

ಅಂಬೇಡ್ಕರ್ ಜಯಂತಿ: ಪ್ರಧಾನಿ ಮೋದಿ, ರಾಹುಲ್ ಸೇರಿ ಗಣ್ಯರಿಂದ ನಮನ

ನವದೆಹಲಿ: ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಸೋಮವಾರ ಪುಷ್ಪ ನಮನ ಸಲ್ಲಿಸಿದರು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಕೇಂದ್ರ ಸಚಿವರು, ಸಂಸದರು ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.

ತೀವ್ರ ಸಂಕಷ್ಟಗಳ ನಡುವೆಯು ಅಸಾಧಾರಣ ಸಾಧನೆ ಮಾಡುವ ಮೂಲಕ ಅಂಬೇಡ್ಕರ್ ಅವರು ಜಾಗತಿಕ ಮನ್ನಣೆ ಗಳಿಸಿದ್ದಾರೆ. ದೀನ ದಲಿತರ ಸಬಲೀಕರಣಕ್ಕೆ ಶಿಕ್ಷಣವೊಂದೇ ಮಾರ್ಗವೆಂದು ಅವರು ಪ್ರತಿಪಾದಿಸಿದ್ದರು’ ಎಂದು ಮುರ್ಮು ಅವರು ‘ಎಕ್ಸ್‌’ನಲ್ಲಿ ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button