bellary

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ಬಳ್ಳಾರಿ,ಜು12(ಕರ್ನಾಟಕ ವಾರ್ತೆ): ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 45 ವರ್ಷದ ಗೋಪಾಲ್ ಮಂಡಲ್ ಎಂಬ ವ್ಯಕ್ತಿಯು ಜು.07 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸುಮಾರು 5.3 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು ಮತ್ತು ನೀಲಿ ಬಣ್ಣದ ಅಂಗಿ, ನೀಲಿ ಬಣ್ಣದ ಲುಂಗಿ ಧರಿಸಿರುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ದೊರೆತಲ್ಲಿ ಠಾಣೆಯ ದೂ.ಸಂ.08392-240731 ಸಂಪರ್ಕಿಸಲು ಕೊರಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button