
Featured StoryUdupi
ಉಡುಪಿ: ನಾಳೆ (ಜೂ 13) ಶಾಲೆಗಳಿಗೆ ರಜೆ ಘೋಷಣೆ
ಉಡುಪಿ:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ಹವಾಮಾನ ಇಲಾಖೆಯ ರೆಡ್ ಆಲ್ಬರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:13.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.




