Featured StoryUttara Kannada

ರೆಡ್ ಅಲರ್ಟ್ : ಕರಾವಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ: ಜನ ಜಾಗ್ರತೆ ಯಿಂದ ಇರಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ವಿನಂತಿ

ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು.

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜುಲೈ 25 ರ ರಾತ್ರಿ 8.30 ರಿಂದ ಜುಲೈ 26 ರ ಬೆಳಿಗ್ಗೆ 5.30 ರ ವರೆಗೆ ರೆಡ್ ಅಲರ್ಟ್ ಎಂದು ಮುನ್ಸೂಚನೆ ನೀಡಲಾಗಿದ್ದು ,ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.

ಮಳೆ ಬೀಳುವಾಗ ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗ ಬಾರದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು.

ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿಯ ದಡದಲ್ಲಿ ಯಾವುದೇ ಸಮಯದಲ್ಲಿ ಪ್ರವಾಹ ಉಂಟಾಗಬಹುದಾದ ಸಾಧ್ಯತೆ ಇರುವುದರಿಂದ ಅಂತಹ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಮಳೆಯ ಜೊತೆಗೆ ಗಾಳಿ ಕೂಡಾ 35-45 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆಯನುಸಾರ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ವಿನಂತಿಸಿದ್ದಾರೆ.
ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಸಂಖ್ಯೆ 08382-229857 ಮತ್ತು ಮೊ.9483511015 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಶಾಲೆಗಳಿಗೆ ರಜೆ:
ಕರಾವಳಿ ತಾಲೂಕಿನ ಶಾಲೆಗಳಿಗೆ ರಜೆ ಸಹ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೊಯಿಡಾ ತಾಲೂಕಿನ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.
..

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button