Raichur

ವಿಕಲಚೇತನರಿಗಾಗಿ ವಿವಿಧ ಯೋಜನೆಗಳಿಂದ ಅರ್ಜಿ ಆಹ್ವಾನ

ರಾಯಚೂರು, ಜು.೨೭, (ಕ.ವಾ):- ೨೦೨೧-೨೨ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ವಿವಿಧ ಯೋಜನೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪ್ರತಿಭಾವಂತ ವಿಕಲಚೇತನ ಬಹುಮಾನ ಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಯೋಜನೆ, ವಿಕಲಚೇತನರ ಸಾಧನ-ಸಲಕರಣೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೆಲ್ ಕಿಟ್ ಯೋಜನೆ, ಶ್ರವಣದೋಷವುಳ್ಳವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನೆ ಮತ್ತು ಪ್ರತಿಭೆ ಯೋಜನೆ, ನಿರಾಮಯ ವಿಮಾ-ಯೋಜನೆ(ಬುದ್ಧಿಮಾಂದ್ಯರಿಗೆ), ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳಿಗೆ ಶಿಶುಪಾಲನಾ ಭತ್ಯೆ ಯೋಜನೆ ೨೦೨೧ರ ಡಿಸೆಂಬರ್ ೩೦ ಹಾಗೂ
ಸ್ವಯಂ ಉದ್ಯೋಗ ಕೈಗೊಳ್ಳುವ ಆಧಾರ್ ಯೋಜನೆ, ವಿವಾಹ ಪ್ರೋತ್ಸಾಹಧನ ಯೋಜನೆ, ವಿಕಲಚೇತನರ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ ೨೦೨೧ರ ಆಗಸ್ಟ್ ೩೦ ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಇಲಾಖೆಯ ವೈಬ್ ಸೈಟ್: ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ: ೦೮೫೩೨-೨೨೮೫೬೬ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button