Crime

ಉಡುಪಿ | ಕೆಲಸಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಸುರೇಂದ್ರ ನಾಯ್ಕ (36) ಎಂಬ ವ್ಯಕ್ತಿಯು ಜೂನ್ 28 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button