Udupi

ಉಡುಪಿ | ಹಲವು ಸುದ್ದಿ ಒಂದು ಲಿಂಕ್!

ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ, ಆಗಸ್ಟ್ 11 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶುಕ್ರವಾರ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ಎಜುಕೇಶನ್ ಸೊಸೈಟಿ ಯ ಅಧ್ಯಕ್ಷ ಗಣಪತಿ ಕಾರಂತ, ಬಾಲ ಪ್ರತಿಭೆಗಳ ಅನಾವರಣಗೊಳಿಸಲು ಚಿಗುರು ಒಂದು ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ Udupi

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕಾರ್ಯಕ್ರಮದ ಕುರಿತು ಮಾತನಾಡಿದರು.

ಅಭಿರಾಮ್ ಪಾಠಕ್ ಮತ್ತು ತಂಡದಿAದ ಏಕವ್ಯಕ್ತಿ ಪ್ರದರ್ಶನ, ವೀಕ್ಷಿತಾ ಮತ್ತು ತಂಡದಿAದ ಸುಗಮ ಸಂಗೀತ, ಶ್ರೀ ವಿಶ್ವ ಯಕ್ಷ ನೃತ್ಯ ಕಲಾ ನಿಕೇತನ ನೀಲಾವರ ಇದರ ಸಂಚಿತಾ ಮತ್ತು ತಂಡದಿAದ ಶಾಸ್ತ್ರೀಯ ನೃತ್ಯ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಭವಿಷ್ ಮತ್ತು ತಂಡದಿAದ ಜನಪದ ಗೀತೆ, ಶ್ರೀ ಸಾಯಿ ಸ್ವರಾಂಜಲಿ ಹೊಸೂರು ಕರ್ಜೆ ಇದರ ಹೆಚ್ ಪ್ರಣತಿ ಭಟ್ ಮತ್ತು ತಂಡದಿAದ ಶಾಸ್ತ್ರಿಯ ಸಂಗೀತ ಮತ್ತು ಡಾ.ಚಂದ್ರಶೇಖರ್ ಕಂಬಾರ ಇವರು ರಚಿಸಿ ಶ್ರೀ ಸಂತೋಷ ನಾಯಕ್ ಪಟ್ಲ ಇವರು ನಿರ್ದೇಶಿಸಿದ “ಪುಷ್ಪ ರಾಣಿ” ನಾಟಕವು ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶನ ನೀಡಲಾಯಿತು .
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಮತ್ತು ಸಾಂಸ್ಕೃತಿಕ ಚಿಂತಕಿ ಹೇಮಲತಾ, ಕನ್ನಡ ಸಾಹಿತ್ಯ ಪರಿಷತ್ ನ ಕಾಪು ತಾಲೂಕು ಘಟಕದ ಜತೆ ಕಾರ್ಯದರ್ಶಿ ಕೃಷ್ಣ ಕುಮಾರ್ ರಾವ್, ಶಾಲೆಯ ಬೋಧಕ ಮತ್ತು ಬೋದಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ಬಿ ಕೋಟ್ಯಾನ್ ನಿರೂಪಿಸಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧ ಪಿ. ಶೆಟ್ಟಿ ವಂದಿಸಿದರು.

ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಉಡುಪಿ, ಆಗಸ್ಟ್ 11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಸ್ಪರ್ಧೆಗಳ ವಿವರ:
ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ. ರಿಲೇ, 4*400 ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್ ಹಾಗೂ ಥ್ರೋಬಾಲ್ ಪಂದ್ಯಗಳು ನಡೆಯಲಿವೆ. (ಫುಟ್‌ಬಾಲ್ ಪಂದ್ಯಾಟವು ಆಗಸ್ಟ್ 16 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬಹುದಾಗಿದೆ.
ಮಹಿಳೆಯರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ. ರಿಲೇ, 4*400 ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಪಂದ್ಯಾಟಗಳು ನಡೆಯಲಿವೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ.
ಸ್ಪರ್ಧೆಗೆ ಹೆಸರು ಅಥವಾ ತಂಡವನ್ನು ನೋಂದಾಯಿಸಲು ಆಗಸ್ಟ್ 14 ಕೊನೆಯ ದಿನ. ಕ್ರೀಡಾಕೂಟ ನಡೆಯುವ ದಿನದಂದು ನೋಂದಣಿಗೆ ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ತಾಲೂಕು ಯುವಜನ ಕ್ರೀಡಾಧಿಕಾರಿ ಮೊ.ನಂ: 9008857495 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 11 (ಕವಾ): ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‌ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಗ್ರಾಮಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, “ಬಿ” ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.

ವ್ಯಕ್ತಿ ಸ್ಥಿತಿ ಚಿಂತಾಜನಕ :ವಾರಸುದಾರರಿಗೆ ಸೂಚನೆ
ಉಡುಪಿ, ಆಗಸ್ಟ್ 11 (ಕವಾ): ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಚಂದ್ರಶೇಖರ್ (61) ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಸಾಲಿಗ್ರಾಮ ಪ.ಪಂ: ಚೈನಿಸ್ ಮಾಂಜಾ ಬಳಕೆ ನಿಷೇಧ
ಉಡುಪಿ, ಆಗಸ್ಟ್ 11 (ಕವಾ): ಗಾಳಿಪಟ ಹಾರಿಸಲು ಹಾಗೂ ಮತ್ತಿತರ ಉದ್ದೇಶಕ್ಕೆ ಬಳಸುತ್ತಿದ್ದ ನೈಲಾನ್ ದಾರ ಮತ್ತು ಸಣ್ಣ ಗಾಜಿನ ಚೂರಿನಿಂದ ಲೇಪಿತವಾದ ಅಥವಾ ಇತರ ಹಾನಿಕಾರಕ ವಸ್ತುಗಳಿಂದ ತಯಾರಾದ “ಚೈನಿಸ್ ಡೋರ್ ಅಥವಾ ಚೈನೀಸ್ ಮಾಂಜಾ” ಎಂದು ಕರೆಯಲ್ಪಡುವ ದಾರಗಳು ಪಕ್ಷಿಗಳಿಗೆ ಪ್ರಾಣಾಂತಕವಾಗಿ ಪರಿಣಮಿಸುತ್ತಿದ್ದ ಹಿನ್ನೆಲೆ, ಸದರಿ ದಾರಗಳ ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಸರಕಾರ ಆದೇಶ ಹೊರಡಿಸಿರುತ್ತದೆ.

ಆದುದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ಗಾಳಿಪಟ ಹಾರಿಸಲು ಅಪಾಯಕಾರಿಯಾದ ಚೂಪಾಗಿರುವ ಮಾಂಜಾ, ನೈಲಾನ್, ಗಾಜು ಅಥವಾ ಲೋಹದಿಂದ ಲೇಪಿತವಾದ ಹತ್ತಿ ದಾರವನ್ನು ಬಳಕೆ ಮತ್ತು ಮಾರಾಟ ಮಾಡದಂತೆ, ಬದಲಾಗಿ ಸರಳವಾದ ಹತ್ತಿ ದಾರವನ್ನು ಮಾತ್ರ ಬಳಸುವಂತೆ ಸಾಲಿಗ್ರಾಮ ಪಟ್ಟಣ ವಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ
ಉಡುಪಿ, ಆಗಸ್ಟ್ 11 (ಕವಾ): ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್, ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (3 ವರ್ಷ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (3 ವರ್ಷ) ಕೋರ್ಸ್ಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿಪೆಟ್, 437/ಎ, ಹೆಬ್ಬಾಳ ಇಂಡಸ್ಟಿçÃಯಲ್ ಏರಿಯಾ, ಮೈಸೂರು ದೂ.ಸಂಖ್ಯೆ: 0821-2510618, 9480253024, 9791431827 ಅಥವಾ ವೆಬ್‌ಸೈಟ್ ತಿತಿತಿ.ಛಿiಠಿeಣ.gov.iಟಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಪೆಟ್ ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

ತೋಟಗಾರಿಕೆ ದಿನ ಆಚರಣೆ Udupi

ತೋಟಗಾರಿಕೆ ದಿನ ಆಚರಣೆ
ಉಡುಪಿ, ಆಗಸ್ಟ್ 11 (ಕವಾ): ತೋಟಗಾರಿಕೆ ಇಲಾಖೆ, ಉಡುಪಿ ಇವರ ವತಿಯಿಂದ ತೋಟಗಾರಿಕೆ ಪಿತಾಮಹ ಡಾ||ಎಂ.ಹೆಚ್. ಮರಿಗೌಡರವರ 109 ನೇ ಜನ್ಮ ದಿನಾಚರಣೆಯನ್ನು, ತೋಟಗಾರಿಕೆ ದಿನವನ್ನಾಗಿ ಉಡುಪಿಯ ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಸಸಿಗಳನ್ನು ನೆಡುವ ಮೂಲಕ ಶುಕ್ರವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೆಚ್.ಕೆ. ಬೀಳಗಿ, ಹೇಮಂತ್ ಕುಮಾರ್, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಉಡುಪಿ ತಾಲೂಕಿನ ರೈತರು ಹಾಗೂ ಮತ್ತಿತರರು ಭಾಗವಹಿಸಿದ್ದರು.

IMG 20250811 WA0055 Udupi
ಜಾಹೀರಾತು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button