Featured StoryUdupi

ದ್ವೇಷ ಭಾಷಣ: ಶರತ್ ಶೆಟ್ಟಿ, ವಡ್ಡರ್ಸೆ ವಿರುದ್ದ ಪ್ರಕರಣ

ಉಡುಪಿ: ದ್ವೇಷ ಭಾಷಣಕ್ಕೆ ಸಂಬಂಧಿಸಿ ಶರತ್ ಶೆಟ್ಟಿ, ವಡ್ಡರ್ಸೆ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.9ರಂದು ಕೋಟ ವಸಂತ ಗಿಳಿಯಾರ್‌ ಫೇಸ್‌ ಬುಕ್‌ ಖಾತೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ನ್ನು ಆಳವಡಿಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಒಂದು ಪೋಸ್ಟ್ ಹಾಕಿದ್ದು, ಧರ್ಮ ಧರ್ಮಗಳ ಮಧ್ಯ ,ಜಾತಿಗಳ ಮಧ್ಯ, ಸಮುದಾಯಗಳ ಮಧ್ಯ ಎತ್ತಿಕಟ್ಟಿ ಕೋಮು ಗಲಭೆಯನ್ನು ಸೃಷ್ಠಿಸುವಂತ ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿಗೆ ಪ್ರಚೋದಿಸುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೆಂಪು ಮತ್ತು ನೀಲಿ ಬಣ್ಣದಲ್ಲಿ ಗುರುತು ಮಾಡಿದ ನಕ್ಷೆಯನ್ನು ಕೂಡ ಪ್ರಸಾರ ಮಾಡಿರುವ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು.

ಇದೇ ಪೇಸ್‌ಬುಕ್‌ ಪೋಸ್ಟ್‌ನ್ನು ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶರತ್ ಶೆಟ್ಟಿ, ವಡ್ಡರ್ಸೆ ಎಂಬವರು ರೀ ಪೊಸ್ಟ್‌ ಮಾಡಿದ್ದು, ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಜೀರೋ ಅಪರಾಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button