Udupi

ಉಡುಪಿ : ತಿಮರೋಡಿಗೆ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶರತು ಬದ್ಧ ಜಾಮೀನು ಮಂಜೂರು ಮಾಡಿದೆ.

ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4:00ಗೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಶರತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button