Crime

ಕಾರ್ಕಳ ಕೊಲೆ ಪ್ರಕರಣ: ಆರೋಪಿ ಬಂಧನ

ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಡೆದ ಮಂಗಳೂರು ಮೂಲದ ನವೀನ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬAಧಿಸಿ ಆರೋಪಿ ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಸಂಜೀವ ಗೌಡ ಎಂಬವರ ಮಗ ಪರೀಕ್ಷಿತ್(೪೪) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಪರೀಕ್ಷಿತ್‌ಗೆ ಪರಿಚಯ ಇದ್ದ ಮಹಿಳೆ ಜೊತೆ ನವೀನ್ ಪೂಜಾರಿ ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಈ ವಿಚಾರವಾಗಿ ಇವರ ಮಧ್ಯೆ ನಡೆದಿದ್ದು, ಇದುವೇ ಕೊಲೆ ಕಾರಣ ಎಂದು ತಿಳಿದುಬಂದಿದೆ.


ಇಂದು ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾg

Back to top button