Education

ರಾಜ್ಯದ ಅನುದಾನ ರಹಿತ ಶಿಕ್ಷಕರು-ಬೋಧಕೇತರ ಸಿಬ್ಬಂದಿಗೆ ಅನುದಾನ ಬಿಡುಗಡೆ!

ಬೆಂಗಳೂರು : ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರಕಾರ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಘೋಷಣೆ ಮಾಡಿದ್ದ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

teacher Education

ರಾಜ್ಯ ಸರಕಾರ ವಿಶೇಷ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಪರಿಹಾರ ಫ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 10,347.25 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ದಾಖಲೆ ಸಲ್ಲಿಸಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ನೇರವಾಗಿ ಬ್ಯಾಂಕ್ ಖಾತೆಯಲ್ಲಿ ಪರಿಹಾರ ಧನ ಜಮೆಯಾಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button