
ಪವಿತ್ರ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy Case) ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.
ಮಂಗಳವಾರ (ಸೆ.2) 57ನೇ ಸೆಷನ್ಸ್ ಕೋರ್ಟ್ ಪವಿತ್ರಾ ಗೌಡ (Pavithra Gowda) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇತ್ತೀಚೆಗೆ ಎ 1 ಆಗಿರುವ ಪವಿತ್ರಾ ಗೌಡ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಪವಿತ್ರಾ ವಕೀಲ ಬಾಲನ್ ಮಂಡಿಸಿದ್ದರು. ಸುಪ್ರೀಂಕೋರ್ಟ್ ಆದೇಶವನ್ನು ನಾವು ಪ್ರಶ್ನಿಸುತ್ತಿಲ್ಲ. ಆದರೆ ಆದೇಶದಲ್ಲಿ ತಾಂತ್ರಿಕ ಲೋಪ ಇದೆ. ಆರೋಪಪಟ್ಟಿಯನ್ನು ಬಿಎನ್ ಬದಲು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿರುವುದರಿಂದ ಕಡ್ಡಾಯ ಜಾಮೀನಿಗೆ ನಮ್ಮ ಕಕ್ಷಿದಾರರು ಅರ್ಹರು, ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ವಾದ ಮಾಡಿದ್ದಾರೆ ಎಂದು ವಾದಿಸಿದ್ದರು.
ಬಾಲನ್ ಅವರ ಈ ವಾದಕ್ಕೆ ಪ್ರತಿವಾದಿಯಾದ ಸಚಿನ್ ಆಕ್ಷೇಪ ವ್ಯಕ್ತಪಡಿಸಿದ್ದು, ಜಾಮೀನು ರದ್ದು ಮಾಡದಂತೆ ಮನವಿಯನ್ನು ಮಾಡಿಕೊಂಡಿದ್ದರು.
ಅದರಂತೆ ಕೋರ್ಟ್ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿಚಾರಣೆಯ ನಂತರ ಪವಿತ್ರಾ ಗೌಡ, ದರ್ಶನ್ ಸೇರಿ 7 ಜನ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತಕ್ಷಣ ಬಂಧಿಸುವಂತೆ ಆದೇಶ ನೀಡಿತ್ತು. ಆಗಸ್ಟ್ 14ರಂದು ಪವಿತ್ರಾ ಗೌಡ ಮತ್ತೆ ಜೈಲು ಸೇರಿದ್ದರು.




