
Politics
ಎಲ್ಲರ ಗಮನ ದೆಹಲಿಯತ್ತ: ಇಂದು ಸಚಿವರ ಪಟ್ಟಿ ಅಂತಿಮ ಸಾಧ್ಯತೆ!
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ತಡರಾತ್ರಿ ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿಯಾಗಿ ಸಚಿವ ಸಂಪುಟ ಅಂತಿಮಗೊಳಿಸುವ ಸಾಧ್ಯತೆ ಹೆಚ್ಚಿದೆ.
ಭಾನುವಾರ ರಾತ್ರಿ 9ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೊಶಿ ಅವರೊಂದಿಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ತಡರಾತ್ರಿವರೆಗೆ ದೆಹಲಿಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೂ ಕೂಡ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದು, ಬೊಮ್ಮಾಯಿ ಅವರು ಸಿದ್ಧಪಡಿಸಿ ತಂದಿದ್ದ ಪಟ್ಟಿಯನ್ನು ಪರಾಮರ್ಶಿಸಿದರು ಎಂದು ಮೂಲಗಳು ತಿಳಿಸಿವೆ.




