Dakshina Kannada

ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ ಆದರೆ ಇಗ್ನೊ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆಯೇ – ಗೊಂದಲದಲ್ಲಿ ವಿದ್ಯಾರ್ಥಿಗಳು!

ಮಂಗಳೂರು: ದ.ಕ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಂಗಳೂರು ವಿವಿ ಪರೀಕ್ಷೆಯನ್ನು ಮುಂದೂಡಿ ಆದೇಶಿಸಲಾಗಿದೆ.

ಆದರೆ ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆಗಸ್ಟ್ 3 ರಿಂದ ಪರೀಕ್ಷೆ ಆರಂಭವಾಗಿದೆ. ಇದೀಗ ಆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆಯೇ ಇಲ್ಲವೇ ಎಂಬ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಏರ್ಪಟ್ಟಿದೆ‌.

ಈ ಕುರಿತು ಇಗ್ನೊ ಕಚೇರಿಗೆ ಫೋನಾಯಿಸಿದರೆ ಕರೆ ಸ್ವೀಕರಿಸುತ್ತಿಲ್ಲ ಎಂಬುವುದು ವಿದ್ಯಾರ್ಥಿಗಳ ಅಳಲು. ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಈ ಕುರಿತು ಸ್ಪಷ್ಟನೆ ನೀಡಿ ಗೊಂದಲ ನಿವಾರಿಸಬೇಕಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button