Featured StoryPolitics

ಕೊಳ್ಳೆಗಾಲದ ಶಾಸಕ ಎನ್.ಮಹೇಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷವನ್ನು ಪ್ರತಿನಿಧಿಸುವ ಕೇಸರಿ ಶಾಲು ಹೊದಿಸಿ ಎನ್‌.ಮಹೇಶ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

2018ರ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಮಹೇಶ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದರು.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಎಸ್‌ಪಿ ರಾಜ್ಯದಲ್ಲಿ ಚುನಾವಣೆ ಎದುರಿಸಿತ್ತು. 71,792 ಮತಗಳನ್ನು ಪಡೆದು ಎನ್. ಮಹೇಶ್ ಗೆಲುವು ಸಾಧಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಗೆದ್ದು ಶಾಸಕರಾಗಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button