Crime

ಜನರನ್ನು ರಕ್ಷಿಸಲು ಹೋಗಿ ಅಪಾಯದಲ್ಲಿ ಸಿಲುಕಿದ ಸಚಿವ; ಹೆಲಿಕಾಪ್ಟರ್’ನಲ್ಲಿ ಲಿಫ್ಟ್

ಭೋಪಾಲ್:ಭಾರೀ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿದ ಗ್ರಾಮಸ್ಥರನ್ನು ರಕ್ಷಿಸಲು ಹೋಗಿದ್ದ ಸಚಿವರೇ ಅಪಾಯದಲ್ಲಿ ಸಿಲುಕಿ ಹಾಕಿಕೊಂಡು ಕೊನೆಗೆ ಅವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಡಾಟಿಯಾ ಜಿಲ್ಲೆಯ ಕೋಟ್ರಾ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡಿದ್ದ ಸ್ಥಳೀಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಬೋಟ್ ನಲ್ಲಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button