Udupi

ಕರಾವಳಿಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಎಂ ಎ ಗಫೂರ್

ಕಾಪು: ಕರಾವಳಿಯ ಮೂರು ಜಿಲ್ಲೆಗಳ ಅಭಿಪ್ರಾಯವನ್ನು ಸಂಗ್ರಹಿಸಿ ಕರಾವಳಿಯ ಸಮಗ್ರ ಅಭಿವೃಧ್ಧಿಗೆ ಮಾಸ್ಟರ್ ಪ್ಲಾನ್ ರಚಿಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸುವುದಾಗಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಅವರು ಕಾಪುವಿನ ಇಹಸಾನ್ ಸಭಾಂಗಣದ ವತಿಯಿಂದ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಕರಾವಳಿ ಪ್ರದೇಶದಲ್ಲಿ ಪ್ರವಾಸೋಧ್ಯಮ ವಿಪುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಇಲ್ಲಿನ ಅಭಿವೃದ್ಗಧಿಗೆ ಈ ಭಾಗದ ಶಾಸಕರು, ಪಕ್ಷದ ಮುಖಂಡರೊಂದಿಗೆ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಸರಕಾರ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ನುಡಿದರು.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ವ್ಯಕ್ತಿ ನಿಷ್ಠೆ, ಪಕ್ಷ ನಿಷ್ಟೆ, ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಂಡಾಗ ಗುರಿಮುಟ್ಟಲು ಸಾಧ್ಯ. ಪಕ್ಷಕ್ಕಾಗಿ ನಿರಂತರ ಸೇವೆಯನ್ನು ನೀಡುತ್ತಾ, ಅಂಬೇಢ್ಕರ್ ನೀಡಿದ ಸಂವಿಧಾನದ ಸಿದ್ಧಾಂತದವನ್ನು ಸೇವೆಯನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಈ ಎಂ.ಎ.ಗಫೂರ್ ಅವರಿಗೆ ಸೂಕ್ತ ಸ್ಥಾನ ಮಾನ ಸಿಕ್ಕಿದೆ ಎಂದು ಹೇಳಿದರು.

, ಅಲ್‌ಇಹ್ಸಾನ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ಯು.ಕೆ. ಮುಸ್ತಫಾ ಸಅದಿ, ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ,ಕಂಬಳ ಅಸೋಸಿಯೇಶನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಮಾಜ ಸೇವಕ ಅಬ್ದುಲ್ ಜಲೀಲ್ ಸಾಹೇಬ್ ಉದ್ಯಾವರ, ಶಭಿ ಕಾಝಿ, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕರೆ ರತ್ನಾಕರ ಶೆಟ್ಟಿ, ಸುಧಾಕರ ಶಟ್ಟಿ,ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ವಾಹೀದ್ ಶೇಖ್, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್‌ಚಂದ್ರ ಜೆ.ಶೆಟ್ಟಿ, ಅಲ್ ರಿಹಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ಅಬ್ದುಲ್ಲಾ, ಇನಾಸಾನ್ ಸಂಸ್ಥೆಯ ಸಾಧಿಕ್ ದೀನಾರ್, ನಝೀರ್ ಅಹಮದ್, , ಸುಲೈಮಾನ್, ಶಾಬು ಸಾಹೇಬ್, ಲುತ್ಫುಲ್ ರಹ್ಮಾನ್ ಸಾಹೇಬ್, ಕಯ್ಯೂಂ ಸಾಹೇಬ್ ಉಪಸ್ತಿತರಿದ್ದರು. ಅದಿಲ್ ಸ್ವಾಗತಿಸಿದರು. ಅಮೀರ್ ಕಾಪು ಕಾರ್ಯಕ್ರಮ ನಿರ್ವಹಿಸಿದರು.

Back to top button