
ಚಿನ್ನದ ಹುಡುಗ ನೀರಜ್ ಚೋಪ್ರಗೆ ಬಹುಮಾನಗಳ ಸುರಿಮಳೆ – ರಾಜ್ಯ ಸರಕಾರಗಳು ಘೋಷಿಸಿದ ಬಹುಮಾನಗಳೇನು?
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ನಲ್ಲಿ 100 ವರ್ಷಗಳ ನಂತರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೂಪ್ರಾ ಪಾತ್ರರಾಗಿದ್ದಾರೆ. ಈ ಹಿನ್ನೆಲೆ ವಿಶ್ವದ್ಯಾಂತ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ಅದರೊಂದಿಗೆ ರಾಜ್ಯ ಸರಕಾರಗಳು ಕೂಡ ಬಹುಮಾನಗಳನ್ನು ಘೋಷಿಸುತ್ತಿದೆ.
ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಕ್ಲಾಸ್ ಒನ್ ಕೆಟಗರಿ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್ಗೆ ಗೌರವ ಸಲ್ಲಿಸಿದ್ದಾರೆ.
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2.25 ಕೋಟಿ ರೂ. ಘೋಷಿಸಿದ್ದು, ಭಾರತೀಯರು ಹೆಮ್ಮೆ ಪಡುವಂತಹ ವಿಚಾರವೆಂದು ಪ್ರಶಂಸಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ 1.5 ಕೋಟಿ ರೂ.ಗಳನ್ನು ಸಹ ಘೋಷಿಸಿದ್ದಾರೆ. ಇನ್ನು 26 ಅಥ್ಲಿಟ್ಸ್ ಆಟಗಾರರಿಗೆ 5 ಲಕ್ಷ ರೂ. ಘೋಷಿದ್ದಾರೆ.
ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರು ಚೋಪ್ರಾ ಅವರಿಗೆ 1 ಕೋಟಿ ರೂ. ಬಹುಮಾನ ನೀಡುವ ಮೂಲಕ ಗೌರವಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿ ಶುಭಾಶಯ ಕೋರಿದ್ದಾರೆ.
ಬಿಸಿಸಿಐ ಕೂಡ ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಕಂಚಿನ ಪದಕ ವಿಜೇತರಾದ ಪಿವಿ ಸಿಂಧು ಅವರಿಗೆ 50 ಲಕ್ಷ ರೂ. ಚಾನು, ರವಿ ಧಾಹಿಯಾ ಮತ್ತು ಭಜರಂಗ್ ಪುನಿಯಾ ಅವರಿಗೆ 25 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದೆ. ಅಲ್ಲದೆ ಪುರುಷರ ಹಾಕಿ ತಂಡಕ್ಕೆ 1.25 ಕೋಟಿ ರೂ. ಕೊಟ್ಟು ಆಟಗಾರರನ್ನು ಗೌರವಿಸಿ ಎಲ್ಲರನ್ನೂ ಐಪಿಎಲ್ನ ಫೈನಲ್ಗೆ ಆಹ್ವಾನಿಸಲಾಗಿದೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಸಹ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ತಿಳಿಸಿದೆ.




