
Featured StoryEducation
ಇಂದು ಮಧ್ಯಾಹ್ನ 3.30 ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ!
ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ರಿಸಲ್ಟ್ ವಿದ್ಯಾರ್ಥಿಗಳ ಮೊಬೈಲ್ಗೆ ಬರಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಹೊಸದಾಗಿ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಹೊರ ಬೀಳಲಿದೆ. ಇವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.
ಶಿಕ್ಷಣ ಇಲಾಖೆ ಜುಲೈ 19 ಹಾಗೂ 22 ರಂದು ರಾಜ್ಯಾದ್ಯಂತ SSLC ಪರೀಕ್ಷೆಗಳನ್ನು ನಡೆಸಿತ್ತು. ಈ ಬಾರಿ 8,19,694 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಅಲ್ಲಿ ಹೊರ ಬೀಳಲಿದೆ.




